ಪ್ರಮುಖ ಸುದ್ದಿ

ರಾಕೇಶ್ ಸಿದ್ದರಾಮಯ್ಯ ಎಲ್ಲಾ ವರ್ಗದ ನಾಯಕರಾಗಿದ್ದರು: ಗೋವಿಂದರಾಜನ್

ಪ್ರಮುಖ ಸುದ್ದಿ, ತಾಂಡವಪುರ, ಜು.29: ದಿವಗಂತ ರಾಕೇಶ್ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಎಲ್ಲಾ ವರ್ಗದ ಜನರ ಪ್ರೀತಿ ವಿಶ್ವಾಸಗಳಿಸಿ ಯುವ ನಾಯಕರಾಗಿ ಹೊರಹೊಮ್ಮಿದ್ದರು ಎಂದು ತಾ.ಪಂ ಉಪಾಧ್ಯಕ್ಷ ಹೆಜ್ಜಿಗೆ ಆರ್.ಗೋವಿಂದರಾಜನ್ ಅಭಿಪ್ರಾಯಪಟ್ಟರು.

ಶನಿವಾರ ನಂಜನಗೂಡು ತಾಲೂಕಿನಾದ್ಯಂತ ಸಂಚರಿಸುವ ರಾಕೇಶ್ ಸಿದ್ದರಾಮಯ್ಯ ಅವರ ರಥಯಾತ್ರೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಯುವ ನಾಯಕ ರಾಕೇಶ್ ಸಿದ್ದರಾಮಯ್ಯ ಅವರು ಜಿಲ್ಲೆಯ ಯಾರಾದರೂ ಅವರ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ತಕ್ಷಣ ಅವರ ಸಮಸ್ಯೆಗೆ ಸ್ಪಂದಿಸುವಂತಹ ಗುಣ ಹೊಂದಿದ್ದರು. ಅಂತಹ ನಾಯಕರನ್ನು ಕಳೆದುಕೊಂಡ ನಮ್ಮ ವರುಣಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಗೆ ತುಂಬಲಾರದ ನಷ್ಟವಾಗಿದೆ ಎಂದರು.

ವಿಶ್ವಕರ್ಮ ಸಮುದಾಯ ಅಭಿವೃದ್ದಿ ನಿಗಮದ ರಾಜ್ಯಾಧ್ಯಕ್ಷ ಎನ್.ನಂದಕುಮಾರ್, ತಗಡೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಹಾಡ್ಯ ರಂಗಸ್ವಾಮಿ, ತಾಲೂಕು ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಅಣ್ಣಯ್ಯ, ಹಾಲುಮತ ಮಹಾಸಭಾದ ತಾ.ಅಧ್ಯಕ್ಷ ಕುಮಾರ್‌ಗೌಡ, ಮಹೇಶ್, ಸಂಗೊಳ್ಳಿ ರಾಯಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: