ಮೈಸೂರು

ಎಸ್ ಡಿ ಪಿ ಐ ವತಿಯಿಂದ ಆಗಸ್ಟ್ 1 ರಿಂದ 25 ರವರೆಗೆ ರಾಷ್ಟ್ರೀಯ ಅಭಿಯಾನ

ಮೈಸೂರು,ಜು.29:  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಆಗಸ್ಟ್ 1 ರಿಂದ 25 ರವರೆಗೆ ‘ಭಾರತದ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೋಧಿಸೋಣ’ ಎಂಬ ರಾಷ್ಟ್ರೀಯ ಅಭಿಯಾನ ನಡೆಸಲಾಗುತ್ತದೆ ಎಂದು ಪಕ್ಷದ ರಾಜ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ತಿಳಿಸಿದರು.

ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಡಿ.ಪಿ.ಐ ವತಿಯಿಂದ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಗುಂಪು ಹಿಂಸಾ ಹತ್ಯೆಯ ವಿರುದ್ಧ ಜನರನ್ನು ಸಂಘಟಿಸುವ ಮತ್ತು ಪ್ರತಿರೋಧಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ರಾಷ್ಷ್ರದಾದ್ಯಂತ ಸ್ನೇಹ ಕೂಟ, ವಿಚಾರ ಸಂಕಿರಣ, ರ್ಯಾಲಿ, ಬೃಹತ್ ಸಾರ್ವಜನಿಕ ಸಭೆಗಳು, ಗ್ರಾಮ ಸುರಕ್ಷ ಸಮಿತಿಗಳ ರಚನೆ, ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಆನ್ ಲೈನ್ ಫಿರ್ಯಾದಿ ಸಲ್ಲಿಕೆ, ಪೋಸ್ಟರ್ ಅಭಿಯಾನ, ಕರಪತ್ರ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ದೇಶದಾದ್ಯಂತ ಸಂಘಟಿಸಲಾಗುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 34 ಬೃಹತ್ ಸಾರ್ವಜನಿಕ ಸಭೆಗಳು, 150 ಕ್ಕೂ ಹೆಚ್ಚು ಕಾರ್ನರ್ ಮೀಟ್ ಗಳು ಮತ್ತು 10 ವಿಚಾರ ಸಂಕಿರಣಗಳನ್ನು ನಡೆಸಲಾಗುತ್ತದೆ ಎಂದು ಹೇಳಿದರು.

ಈ ರಾಷ್ಷ್ರೀಯ ಅಭಿಯಾನವು ರಾಜಸ್ತಾನದಲ್ಲಿ ಉದ್ಘಾಟನೆಗೊಳ್ಳಲಿದ್ದು, ಅಭಿಯಾನದ ಕೊನೆಯ ದಿನವಾದ ಆಗಸ್ಟ್ 25 ರಂದು ‘ಮನೆಯಿಂದ ಹೊರಗೆ ಬನ್ನಿ’ ಎಂಬ ಫಲಕವನ್ನು ಪ್ರದರ್ಶಿಸಿ, ಕಪ್ಪುಪಟ್ಟಿಯನ್ನು ತೋಳುಗಳಿಗೆ ಕಟ್ಟುವ ಮೂಲಕ ದೇಶದ ಗಮನ ಸೆಳೆದು ದೆಹಲಿಯ ಜಂತರ ಮಂತರ್ ನಲ್ಲಿ ಅಭಿಯಾನವು ಸಮಾರೋಪಗೊಳ್ಳಲಿದೆ. ಆಗಸ್ಟ್ 25 ರಂದು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಸಬ್ ಅರ್ಬನ್ ಬಸ್ ನಿಲ್ದಾಣದ ವರೆಗೆ ಮಾನವ ಸರಪಳಿಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಕಾರ್ಯದರ್ಶಿಗಳಾದ ಆಮಜದ್ ಪಾಷ, ಅಪ್ಸೆರ್ ಕೂಡ್ಲಿಪೇಟೆ, ನಗರ ಪಾಲಿಕೆ ಸದಸ್ಯ ಎಸ್. ಸ್ವಾಮಿ, ಕೆ.ಆರ್. ಕ್ಷೇತ್ರದ ಅಧ್ಯಕ್ಷ ಆಲೂರು ಮಲ್ಲಣ್ಣ ಹಾಜರಿದ್ದರು. (ವರದಿ: ಎಲ್.ಜಿ)

Leave a Reply

comments

Related Articles

error: