ಮೈಸೂರು

ಜೆಎಸ್ ಎಸ್ ಗುಣಾತ್ಮಕ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸಿದೆ: ಪ್ರೊ.ರಂಗಪ್ಪ

ಕೆಲವು ಶಿಕ್ಷಣ ಸಂಸ್ಥೆಗಳು ಹಣ ಗಳಿಸುವ ಉದ್ದೇಶದಿಂದ ಸಂಸ್ಥೆಗಳನ್ನು ನಡೆಸುತ್ತವೆ. ಆದರೆ ಜೆಎಸ್ ಎಸ್ ಶಿಕ್ಷಣ ಸಂಸ್ಥೆಗಳು ಸೇವಾ ಮಾದರಿಯ ಶಿಕ್ಷಣ ನೀಡುವ ಮೂಲಕ ಇತರ ಸಂಸ್ಥೆಗಳಿಗೆ ಮಾದರಿಯಾಗಿವೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು.

ಊಟಿ ರಸ್ತೆಯಲ್ಲಿರುವ ಜೆಎಸ್ ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರೊ.ಕೆ.ಎಸ್.ರಂಗಪ್ಪ ಮಾತನಾಡಿದರು.

ಜೆಎಸ್ ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜುಗಳು 12 ಸ್ನಾತಕೋತ್ತರ ಮತ್ತು 7ಸಂಶೋಧನಾ ಕೇಂದ್ರಗಳನ್ನು ಹೊಂದಿದೆ. ಸುಸಜ್ಜಿತ ಗ್ರಂಥಾಲಯ, ಪ್ರಯೋಗಾಲಯದಲ್ಲಿ ನುರಿತ ಅಧ್ಯಾಪಕರನ್ನು ಹೊಂದಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸಿದೆ. ಶೈಕ್ಷಣಿಕ ಗುಣಮಟ್ಟದಲ್ಲಿ ಇದುವರೆಗೂ ಯಾವುದೇ ರೀತಿಯ ರಾಜಿಯನ್ನು ಮಾಡಿಕೊಳ್ಳದೇ ಸಂಸ್ಥೆ  ಅತ್ಯನ್ನತ ಮಟ್ಟದಲ್ಲಿದ್ದು, ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ತಿಳಿಸಿದರು.

ಕಾಲೇಜಿನ ಮುಖ್ಯ ಕಾರ್ಯ ನಿರ್ವಾಹಕ ಪ್ರೊ.ವಿ.ಬಿ.ಸಾಂಬಶಿವಯ್ಯ, ಪ್ರಾಂಶುಪಾಲ ಪ್ರೊ.ಎಂ.ಮಹದೇವಪ್ಪ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಹೆಚ್.ಸಿ.ಹೊನ್ನಪ್ಪ, ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಎಂ.ಪಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: