ಕರ್ನಾಟಕಪ್ರಮುಖ ಸುದ್ದಿ

ಜುಲೈ 30 ರಂದು ಸಾರಿಗೆ ಸಂಸ್ಥೆ ರಾಜ್ಯ ಮಟ್ಟದ ಸಾಹಿತ್ಯ ಸಮಾವೇಶ

ದಾವಣಗೆರೆ, ಜುಲೈ 29 : ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಸಾರಿಗೆ ಸಂಸ್ಥೆ ರಾಜ್ಯ ಮಟ್ಟದ ಸಾಹಿತ್ಯ ಸಮಾವೇಶವನ್ನು ಜುಲೈ 30 ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆಯ ವಿದ್ಯಾನಗರ ರಸ್ತೆ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.

ಸಮಾವೇಶದ ಉದ್ಘಾಟನಾ ಸಮಾರಂಭವನ್ನು ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್‍ ಅವರು ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮನು ಬಳಿಗಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪೊಲೀಸ್‍ ಇಲಾಖೆಯ ಅಂಕಣಕಾರರು ಹಾಗೂ ಡಿಐಜಿ ಡಿ.ರೂಪಾ ಅವರು ಭಾಗವಹಿಸಲಿದ್ದಾರೆ. ದಾವಣಗೆರೆ ವಿಭಾಗದ ವಿಭಾಗಾ ನಿಯಂತ್ರಣಾಧಿಕಾರಿ ವಿ.ಐ. ಹೆಗಡೆ, ಕ.ರಾ.ರ ಸಾ.ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಅಧ್ಯಕ್ಷ ವ.ಚ. ಚನ್ನಗೌಡ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ ಅವರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.15 ರಿಂದ 1.45 ರವರೆಗೆ “ಸಾರಿಗೆ ಸಂಸ್ಥೆಯಲ್ಲಿ ಕನ್ನಡ” ಕುರಿತು ಗೋಷ್ಠಿ ನಡೆಯಲಿದ್ದು, ಈ ಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ ಹಾಗೂ ಕಾರ್ಮಿಕ ಮುಖಂಡರಾದ ಡಾ.ಸಿದ್ದನಗೌಡ ಪಾಟೀಲ್‍ ಅವರು ವಹಿಸಲಿದ್ದಾರೆ. ನಂತರ ಮಧ್ಯಾಹ್ನ 2.30 ರಿಂದ 4.00 ರವರೆಗೆ 2ನೇ ಗೋಷ್ಠಿಯಲ್ಲಿ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಖ್ಯಾತ ಕವಿಗಳಾದ ಚಂದ್ರಶೇಖರ ತಾಳ್ಯ ಅವರು ವಹಿಸಲಿದ್ದಾರೆ.

-ಎನ್.ಬಿ.

Leave a Reply

comments

Related Articles

error: