ಕರ್ನಾಟಕ

ಸ್ವಾತಂತ್ರ್ಯ ಹೋರಾಟಗಾರ ವಿದ್ಯಾಧರ ಗುರೂಜಿ ನಿಧನ

ಕಲಬುರಗಿ,ಜು.30-ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿದ್ಯಾಧರ ಗುರೂಜಿ (೧೦೫) ಶನಿವಾರ ಜಯದೇವ ಹ್ರದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಶುಕ್ರವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಕುಸಿತಕ್ಕೊಳಗಾಗಿ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು.

ಇವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ವಿದ್ಯಾಧರ ಗುರೂಜಿ ಅವರ ಆಸೆಯಂತೆ ಕಲಬುರಗಿಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿಗೆ ದೇಹದಾನ ಮಾಡಲಾಗಿದೆ.  (ವರದಿ-ಎಸ್.ಎನ್, ಎಂ.ಎನ್)

 

Leave a Reply

comments

Related Articles

error: