ಮೈಸೂರು

ಕೂಲಿ ಕಾರ್ಮಿಕ ನೇಣಿಗೆ ಶರಣು

ಮೈಸೂರು,ಜು.30:- ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾತಗಳ್ಳಿಯಲ್ಲಿ ನಡೆದಿದೆ.

ಮೃತನನ್ನು ಪಳನಿ (35) ಎಂದು ಗುರುತಿಸಲಾಗಿದೆ. ಈತ ಮನೆಯೊಂದರ ನವೀಕರಣ ಕೆಲಸಕ್ಕಾಗಿ ಬಂದಿದ್ದ. ಕಳೆದ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: