ಮೈಸೂರು

ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಮೈಸೂರು,ಜು.30:- ಸಾಲಬಾಧೆ ತಾಳಲಾರದೇ  ರೈತರೋರ್ವರು  ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ತಾಲೂಕು ಮರಟಿಕ್ಯಾತನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಮರಟಿಕ್ಯಾತನಹಳ್ಳಿ ಶಿವಕುಮಾರ್ (35) ಎಂದು ಗುರುತಿಸಲಾಗಿದೆ. ಇವರು ಕೃಷಿ ಇನ್ನಿತರ ಉದ್ದೇಶಗಳಿಗಾಗಿ 5 ಲಕ್ಷ ರೂ.ಸಾಲ ಮಾಡಿದ್ದರು.  ಎರಡು ಎಕರೆ ಜಮೀನು ಹೊಂದಿದ್ದ ಶಿವಕುಮಾರ್ ಮಾಡಿದ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಪುರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. (ಕೆ.ಎಸ್,ಆರ್.ವಿ,ಎಸ್.ಎಚ್)

Leave a Reply

comments

Related Articles

error: