ಮೈಸೂರು

ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ವ್ಯಕ್ತಿ ಸಾವು

ಮೈಸೂರು,ಜು.31:-ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ  ವ್ಯಕ್ತಿಯೋರ್ವರು  ಸಾವನ್ನಪ್ಪಿದ ಘಟನೆ  ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಕೂಲಿಕಾರ್ಮಿಕ ಗಾಂಧಿ(55) ಎಂದು ಗುರುತಿಸಲಾಗಿದೆ. ಸಂಗರ ಶೆಟ್ಟಹಳ್ಳಿ ಕೃಷಿ ಕೆಲಸವನ್ನು ಮಾಡುತ್ತಿದ್ದು, ತೀವ್ರ ಎದೆನೋವಿನಿಂದ ಕುಸಿದು ಬಿದ್ದಿದ್ದ.  ಗಂಟೆ ಕಳೆದರೂ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಬೈಕ್ ನಲ್ಲಿ ಕರೆದೊಯ್ಯಲು ಪ್ರಯತ್ನಿಸಲಾಯಿತು. ಬೈಕ್ ನಲ್ಲಿ ಬೆಟ್ಟದಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ  ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. (ಆರ್.ವಿ,ಎಸ್.ಎಚ್)

Leave a Reply

comments

Related Articles

error: