ಕರ್ನಾಟಕಮೈಸೂರು

ರಾಜ್ಯ ಪ್ರಶಸ್ತಿಗೆ ವ್ಯಕ್ತಿ, ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಆ.1 : ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ವೈಯಕ್ತಿಕ ಹಾಗೂ ಸಂಸ್ಥೆಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.

ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸಂಸ್ಥೆಗೆ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಮಕ್ಕಳ ದಿನಾಚರಣೆಯಂದು ಗೌರವಿಸಲಾಗುವುದು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಆಗಸ್ಟ್ 31ರೊಳಗೆ ಸಲ್ಲಿಸಬೇಕು.

-ಎನ್.ಬಿ.

Leave a Reply

comments

Related Articles

error: