ಮೈಸೂರು

ರೈತರ ಹಿತ ಕಾಯುವಲ್ಲಿ ಸರ್ಕಾರ ವಿಫಲ : ರೈತ ಮೋರ್ಚಾ ಆರೋಪ

ಮೈಸೂರು,ಆ.1:- ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಮತ್ತು ರೈತರ ಹಿತ ಕಾಯುವಲ್ಲಿ ಅದರ ವೈಫಲ್ಯಗಳನ್ನು ಖಂಡಿಸಿ ಭಾರತೀಯ ಜನತಾಪಾರ್ಟಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಮಳೆಗಾಲ ಆರಂಭದಲ್ಲಿ ಆಶಾದಾಯಕವಿದ್ದರೂ ಜುಲೈ ತಿಂಗಳಲ್ಲಿ ನಿರೀಕ್ಷಿತ ಮಳೆ ಬಿದ್ದಿಲ್ಲ. ಸರ್ಕಾರ 1500 ಕೆರೆಗಳನ್ನು ಡಿನೋಟಿಫೈ ಮಾಡಬಹುದೆಂಬ ಶಂಕೆ ಕಾಡುತ್ತಿದೆ. ಈ ಕಾರಣಕ್ಕೆ ಕೆರೆ ತುಂಬಿಸಿ, ಕೆರೆ ಉಳಿಸಿ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. ರಾಜ್ಯದ ಜಲಾಶಯಗಳ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಆಗಸ್ಟ್ 30ರೊಳಗಾಗಿ ತುಂಬಿಸಲು ನೀರಾವರಿ ಇಲಾಖೆಯ ಮೇಲೆ ಒತ್ತಡ ಹೇರಲಾಗುವುದಲ್ಲದೇ ಕೆರೆಗಳನ್ನು ಡಿನೋಟಿಫೈ ಮಾಡುವ ಕ್ರಮದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಪ್ರಸನ್ನ ಎನ್.ಗೌಡ, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಮಂಜುನಾಥ್  ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: