ಮೈಸೂರು

ಆ.3ರಂದು ದೀಪಾ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ : ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಮೈಸೂರು,ಆ.1 : ನಗರದ ದೀಪಾ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ರಜತ ಮಹೋತ್ಸವದ ವಾರ್ಷಿಕ ಚಟುವಟಿಕೆ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಆ.3ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ರಾಮಪ್ಪ ತಿಳಿಸಿದರು.

ಅಂದು ಬೆಳಗ್ಗೆ 11ಕ್ಕೆ, ನಾರ್ತ್ ಪಾರ್ಕ್ ಅವೆನ್ಯೂನಲ್ಲಿರುವ ಬ್ಯಾಡ್ಮಿಂಟನ್ ಇನ್ ಡೋರ್ ಕೋರ್ಟ್ ನಲ್ಲಿ ನಡೆಯುವ ಸಮಾರಂಭಕ್ಕೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡುವರು, ಮುಖ್ಯ ಅತಿಥಿಗಳಾಗಿ ಜಿ.ಪಂ ಸಾಮಾಜಿಕ ಮತ್ತು ನ್ಯಾಯ ಸಮಿತಿ ಅಧ್ಯಕ್ಷ ಬಸವಣ್ಣ ಭಾಗಿಯಾಗುವರು ಎಂದು ಮಂಗಳವಾರ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಜತ ಮಹೋತ್ಸವದಂಗವಾಗಿ ವರ್ಷದ ಪ್ರತಿ ತಿಂಗಳು ಹಲವಾರು ಚಟುವಟಿಕೆಗಳು ಹಮ್ಮಿಕೊಳ್ಳಲಾಗಿದ್ದು ಅದರಂತೆ ಅಂತರ್ ಶಾಲಾ ಮಟ್ಟದ ಸ್ಪರ್ಧೆಗಳು ನಡೆಯುವುದು ಎಂದು ಹೇಳಿದರು.

ಕೇವಲ 34 ವಿದ್ಯಾರ್ಥಿಗಳಿಂದ ಆರಂಭವಾದ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿರುವರು, ಪ್ರಾಥಮಿಕ ಹಂತದಿಂದ ಪದವಿಪೂರ್ವ ಕಾಲೇಜಿನವರೆಗೂ ಉತ್ತಮ ಶಿಕ್ಷಣವನ್ನು ಸಂಸ್ಥೆಯಿಂದ ನೀಡಲಾಗುತ್ತಿದ್ದು, ಕಳೆದ ಹಲವಾರು ವರ್ಷಗಳಿಂದ ಎಸ್.ಎಸ್.ಎಲ್.ಸಿಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ, ಅಲ್ಲದೇ ಶೇ.35ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೂ ನಮ್ಮಲ್ಲಿ ಅವಕಾಶವಿದ್ದು ಅಂತಹವರಿಗೆ ಉತ್ತಮ ತರಬೇತಿ ನೀಡಿ ಸಮರ್ಥನ್ನಾಗಿಸಲಾಗುವುದು ಎಂದು ತಿಳಿಸಿದರು. ರಜತ ಮಹೋತ್ಸವದಂಗವಾಗಿ ಸಂಸ್ಥೆಯಿಂದ ಹಮ್ಮಿಕೊಂಡಿರುವ ವಾರ್ಷಿಕ ಚಟುವಟಿಕೆಗಳ ಬಗ್ಗೆ ವಿವರ ನೀಡಿ, ಸ್ಪರ್ಧೆಯ ವಿಜೇತರಿಗೆ ವಾರ್ಷಿಕೋತ್ಸವದಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ಸಂಸ್ಥೆಯ ಪದಾಧಿಕಾರಿಗಳಾದ ಸುಬ್ಬರಾವ್, ವಿ.ಎನ್. ಸುಂದರ್,  ಸದಾಶಿವ ಪೂಜಾರಿ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: