ಪ್ರಮುಖ ಸುದ್ದಿಮೈಸೂರು

ರಾಜ್ಯದಲ್ಲಿ ಹಿಂದೂ ನಾಯಕರಿಗೆ ರಕ್ಷಣೆ ಇಲ್ಲ: ಶ್ರೀರಾಮುಲು ಆರೋಪ

ರಾಜ್ಯದ ವಿವಿಧೆಡೆಗಳಲ್ಲಿ ಹಿಂದೂ ಪರ ಸಂಘಟನೆಗಳ ನಾಯಕರು ಹಾಗೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಇದನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದ್ದು, ಹಿಂದೂಪರ ನಾಯಕರಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಪುತ್ರಿಯ ವಿವಾಹದ ಹಿನ್ನೆಲೆಯಲ್ಲಿ ಆಮಂತ್ರಣ ಪತ್ರಿಕೆ ಹಂಚಲು ಮೈಸೂರಿಗೆ ಆಗಮಿಸಿರುವ ಅವರು, ಸಿಎಂ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಾಜ್ಯಪಾಲರು ಈ ಹತ್ಯೆಗೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸಿ, ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಾವೇರಿ ಜಲವಿವಾದದಲ್ಲಿ ಪದೇಪದೇ ರಾಜ್ಯಕ್ಕೆ ಹಿನ್ನಡೆಯಾಗುತ್ತಿದೆ. ಈ ಬಗ್ಗೆ ಸರಿಯಾಗಿ ನಿರ್ಣಯ ಕೈಗೊಳ್ಳಬೇಕೆಂದು ಕಳಕಳಿ ವ್ಯಕ್ತಪಡಿಸಿದರು. ಅಲ್ಲದೆ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರು ಬಿಜೆಪಿಗೆ ಸೇರ್ಪಡೆಯಾದರೆ ಬಿಜೆಪಿಗೆ ಮತ್ತಷ್ಟು ಬಲ ಬರಲಿದೆ ಎಂದು ಶ್ರೀರಾಮುಲು ತಿಳಿಸಿದರು.

ವಿವಾದಕ್ಕೆ ಟಾಂಗ್:

ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಪುತ್ರಿಯ ವಿವಾಹದ ಆಮಂತ್ರಣ ಪತ್ರಿಕೆ ಅದ್ಧೂರಿತನದಿಂದ ಕೂಡಿದ್ದು, ದುಂದುವೆಚ್ಚ ಮಾಡಲಾಗಿದೆ ಎಂಬ ಟೀಕೆಗಳಿಗೆ ತಮ್ಮದೇ ಧಾಟಿಯಲ್ಲಿ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, “ಆಮಂತ್ರಣ ಪತ್ರಿಕೆ ಅದ್ಧೂರಿತನದಿಂದ ಕೂಡಿಲ್ಲ. ನೂತನ ತಂತ್ರಜ್ಞಾನಕ್ಕೆ ಅನುಗುಣವಾಗಿ ಹೊಸತನದಿಂದ ಕೂಡಿದೆ. ಎಲ್ಲರೂ ಅವರವರ ಯೋಗ್ಯತೆಗೆ ತಕ್ಕಂತೆ ಮದುವೆ ಮಾಡುತ್ತಾರೆ” ಎಂದು ಟಾಂಗ್ ನೀಡಿದ್ದಾರೆ.

Leave a Reply

comments

Related Articles

error: