
ಮೈಸೂರು
ರೈಲಿನಿಂದ ಆಯ ತಪ್ಪಿ ಬಿದ್ದು ವ್ಯಕ್ತಿ ಸಾವು
ಮೈಸೂರು,ಆ.2:- ಚಲಿಸುತ್ತಿರುವ ರೈಲಿನಿಂದ ಆಯ ತಪ್ಪಿ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕಿನ ಕೊಣನೂರು ರೈಲ್ವೆ ಹಳಿ ಬಳಿ ನಡೆದಿದೆ.
ಮೃತ ವ್ಯಕ್ತಿಯು ಸೂಮಾರು 70ರ ವಯೋಮಾನದ ಆಸುಪಾಸಿನವರಾಗಿದ್ದು ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತ ದೇಹವನ್ನು ಮೈಸೂರಿನ ಮೆಡಿಕಲ್ ಕಾಲೇಜಿಗೆ ರೈಲ್ವೆ ಪೋಲಿಸರು ರವಾನಿಸಿದ್ದಾರೆ. ನಂಜನಗೂಡು ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)