ಮನರಂಜನೆ

ಶೌಚಾಲಯ ಕುರಿತು ಜಾಗೃತಿ ಮೂಡಿಸುತ್ತಿರುವ ನಟ ಅಕ್ಷಯ್ ಕುಮಾರ್

ಮುಂಬೈ, ಆ.2: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನಟನೆಯ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅಕ್ಷಯ್ ಕುಮಾರ್  ಹಾಗೂ ಚಿತ್ರತಂಡ, ಪ್ರಸಿದ್ದ ಟಾಯ್ಲೆಟ್ ಹಾಗೂ ಮನೆ ಕ್ಲೀನ್ ವಸ್ತುಗಳ ತಯಾರಿಕೆ ಕಂಪನಿಯೊಂದಿಗೆ ಕೈ ಜೋಡಿಸಿ ಶೌಚಾಲಯದ ಕುರಿತು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ಅವರ ಟಾಯ್ಲೆಟ್ ಏಕ್ ಪ್ರೇಮ್ ಕಥಾ ಕೂಡ ಒಂದು ಸಾಮಾಜಿಕ ಕಳಕಳಿಯುಳ್ಳ ಸಿನಿಮಾವಾಗಿದ್ದು, ಸದ್ಯ ಈ ಚಿತ್ರದ ಪ್ರಮೋಷನ್ ನಲ್ಲಿ ಅಕ್ಷಯ್ ಕುಮಾರ್ ಬ್ಯುಸಿಯಾಗಿದ್ದು, ಭಾರತದಲ್ಲಿ ಮಹಿಳೆಯರಿಗೆ ಶೌಚಾಲಯದ ಅವಶ್ಯಕತೆ ಎಷ್ಟಿದೆ ಎಂಬುದನ್ನು ಒತ್ತಿ ಹೇಳಿದ್ದಾರೆ. ಮಹಿಳೆಯರಿಗೆ ಸುರಕ್ಷಿತ ಮತ್ತು ಸ್ವಚ್ಛ ಶೌಚಾಲಯ, ಮೂಲಭೂತ ಅವಶ್ಯಕತೆಗಳಲ್ಲೊಂದಾಗಿರಬೇಕು ಎಂದು ಅಕ್ಷಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. (ವರದಿ: ಎಲ್.ಜಿ)

 

Leave a Reply

comments

Related Articles

error: