ಕರ್ನಾಟಕ

ಹೇಮಾವತಿ ಜಲಾಶಯದಿಂದ ನೀರು ಹರಿಸುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ರಾಜ್ಯ(ಮಂಡ್ಯ)ಆ.2:-ಕೆ.ಆರ್.ಪೇಟೆ  ತಾಲೂಕಿನ ಕೆರೆಕಟ್ಟೆಗಳಿಗೆ ಗೊರೂರಿನ ಹೇಮಾವತಿ ಜಲಾಶಯದಿಂದ ನೀರು ಹರಿಸಬೇಕೆಂದು ಒತ್ತಾಯಿಸಿ ತಾಲೂಕು ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ  ಬೃಹತ್ ಪ್ರತಿಭಟನೆ ನಡೆಸಿದರು.
ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರದಾಡುವ ಪರಿಸ್ಥಿತಿ ಒದಗಿ ಬಂದಿದೆ. ಆದ್ದರಿಂದ ಕೂಡಲೆ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕೆಲಸವನ್ನು ಸರ್ಕಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು. ತಾಲೂಕು ಜೆಡಿಎಸ್ ವತಿಯಿಂದ ಶಾಸಕ ನಾರಾಯಣಗೌಡ ನೇತೃತ್ವದಲ್ಲಿ ಪಟ್ಟಣದ ಟಿ.ಬಿ.ವೃತ್ತದಿಂದ ತಾಲೂಕು ಕಚೇರಿವರೆಗೆ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ತಾಲೂಕು ಕಚೇರಿಗೆ ತೆರಳಿದ  ಪ್ರತಿಭಟನಾಕಾರರು ತಾಲೂಕಿನ ಕೆರೆಕಟ್ಟೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ಹರಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಕೆ. ರತ್ನಾ ಅವರಿಗೆ ಮನವಿ ಸಲ್ಲಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: