ಪ್ರಮುಖ ಸುದ್ದಿ

ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಪ್ರಮುಖ ಸುದ್ದಿ, ಗುಂಡ್ಲುಪೇಟೆ, ಆ.೨: ಕೇರಳದ ಕಮ್ಯೂನಿಸ್ಟ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ, ದೌರ್ಜನ್ಯ ಹಾಗೂ ಹತ್ಯೆಗಳನ್ನು ನಡೆಸುತ್ತಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಕೇರಳದ ಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇರಳ ರಸ್ತೆಯ ಮದ್ದೂರು ಬಳಿ ಕೆಲಕಾಲ ರಸ್ತೆ ತಡೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು ಕೇರಳ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಮೋರ್ಚಾದ ಜಿಲ್ಲಾಧ್ಯಕ್ಷ ಪ್ರಣಯ್ ಮಾತನಾಡಿ, ಕಮ್ಯೂನಿಸ್ಟ್ ಗೂಂಡಾಗಳಿಂದ ೨೦೧೬ರಿಂದ ಇಲ್ಲಿಯವರೆಗೆ ೧೨ ಹಿಂದೂ ನಾಯಕರ ಹತ್ಯೆಯಾಗಿದೆ. ಇತ್ತೀಚೆಗೆ ದೇಶಾದ್ಯಂತ ಬಿಜೆಪಿ ಪರವಾದ ಒಲವು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಜು.೨೯ರಂದು ತಿರುವನಂತಪುರದಲ್ಲಿ ರಾಜೇಶ್ ಎಲವಕೋಡೆ ಎಂಬುವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ರಾಜ್ಯ ಸರ್ಕಾರವೇ ಹಂತಕರಿಗೆ ಬೆಂಬಲ ನೀಡುತ್ತಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆದ್ದರಿಂದ ರಾಜ್ಯಪಾಲರು ಮಧ್ಯಪ್ರವೇಶಿಸಿ ಗೂಂಡಾಗಳನ್ನು ಬಂಧಿಸಿ ಜೈಲಿಗಟ್ಟಬೇಕು ಹಾಗೂ ಹಿಂದೂ ಮುಖಂಡರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಎಲ್.ಸುರೇಶ್, ಚನ್ನಮಲ್ಲಿಪುರ ಬಸವಣ್ಣ, ಮಾಡ್ರಹಳ್ಳಿ ನಾಗೇಂದ್ರ, ಮಲ್ಲೇಶ್, ಬೆಂಡಗಳ್ಳಿ ನಂದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: