ಸುದ್ದಿ ಸಂಕ್ಷಿಪ್ತ

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಡಿಕೇರಿ ಆ.02:-ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ  ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2017-18 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನ ಪಡೆಯಲು ನವೀಕರಣ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್, 31 ರವರೆಗೆ ಕಾಲಾವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-225628 ನ್ನು ಸಂಪರ್ಕಿಸಬಹುದು.  ಈ ಕಚೇರಿಯಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ.ಸುರೇಶ್ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: