ಪ್ರಮುಖ ಸುದ್ದಿಮೈಸೂರು

ಮೈಸೂರು ವಿವಿ ನೂತನ ಕುಲಸಚಿವರಾಗಿ ಪ್ರೊ.ರಾಜಣ್ಣ

rajanna-web-1ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಪ್ರೊ. ರಾಜಣ್ಣ ಅಧಿಕಾರ ಸ್ವೀಕರಿಸಿದ್ದಾರೆ.

ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಯುವರಾಜ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿರುವ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಸಿ. ಬಸವರಾಜು ಅವರನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಿ ಅಮಾನತು ಮಾಡಲಾಗಿತ್ತು. ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 200 ರ ಪ್ರಕರಣ 17 ರ ಅನ್ವಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಪಡಿಸಲಾಗಿದ್ದು, ಅಪರ ಜಿಲ್ಲಾಧಿಕಾರಿ ವೆಂಕಟೇಶ್ ಅವರನ್ನು ಈ ಹುದ್ದೆಗೆ ಹೆಚ್ಚುವರಿಯಾಗಿ ನೇಮಿಸಲಾಗಿತ್ತು.

ಆದರೆ, ಅವರು ಅಧಿಕಾರ ಸ್ವೀಕರಿಸುವ ಮೊದಲೇ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜಣ್ಣ ಅವರನ್ನು ಕುಲಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಪ್ರೊ. ರಾಜಣ್ಣ , ಮೈಸೂರು ವಿವಿ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅಭಿನಂಧಿಸಿದರು.

Leave a Reply

comments

Related Articles

error: