ಮೈಸೂರು

ಆದಿವಾಸಿಗಳ ಅಭಿವೃದ್ಧಿಗಾಗಿ ಬುಡಕಟ್ಟು ಸಂಶೋಧನಾ ಸಂಸ್ಥೆ ಸ್ಥಾಪಿಸಲಾಗಿದೆ : ಟಿ.ಟಿ.ಬಸವಣ್ಣೇಗೌಡ

ಮೈಸೂರು,ಆ.3:- ವಿಜಯನಗರದ ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ನಿರ್ದೇಶಕ ಟಿ.ಟಿ.ಬಸವಣ್ಣೇಗೌಡ ಗುರುವಾರ ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು ರಾಜ್ಯದಲ್ಲಿ ಮೂಲ ಆದಿವಾಸಿಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಹಾಗೂ ಈ ಸಮುದಾಯಗಳ ಕಲೆ, ಸಂಸ್ಕೃತಿ, ಭಾಷೆ ಮತ್ತು ಇತರ ವಿಷಯಗಳ ಕುರಿತು ಅಧ್ಯಯನ ನಡೆಸಿ ಉಳಿಸಿಕೊಳ್ಳಲು ಈ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಬುಡಕಟ್ಟು ಜನಾಂಗ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ಅಧಿಕಾರಿಗಳಾದ ಕೃಷ್ಣಯ್ಯ, ಗೋಪಾಲಾಚಾರಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: