ಮೈಸೂರು

ಕಲೆಯಿಂದ ಮಕ್ಕಳಲ್ಲಿ ಕ್ರೀಯಾಶೀಲತೆ ಹೆಚ್ಚಾಗಲಿದೆ: ರಾಮದಾಸ್ ಅಂಡ್ಯತಾಯ

ಮೈಸೂರು, ಆ.೩: ಕಲೆ ಮಕ್ಕಳಲ್ಲಿ ಕ್ರಿಯಾಶೀಲತೆ ಹೆಚ್ಚಿಸಲಿದ್ದು, ಪೋಷಕರು ಮಕ್ಕಳನ್ನು ಕೇವಲ ಶಿಕ್ಷಣಕ್ಕೆ ಸೀಮಿತವಾಗಿಸದೆ ಕಲೆಯಲ್ಲೂ ತೊಡಗಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದು ಹಿರಿಯ ಕಲಾವಿದ ಪ್ರೊ. ರಾಮದಾಸ್ ಅಂಡ್ಯತಾಯ ಅಭಿಪ್ರಾಯಪಟ್ಟರು.
ಗುರುವಾರ ರವಿವರ್ಮ ಕಲಾಶಾಲೆ ವತಿಯಿಂದ ಜಿಲ್ಲಾ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರ ಸಮೂಹ ಕಲಾತರಂಗದಿಂದ ಆಯೋಜಿಸಿದ್ದ ಚಿತ್ರಕಲಾ ಪ್ರದರ್ಶನ ಹಾಗೂ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲೆ ಮನುಷ್ಯನನ್ನು ಪರಿಪೂರ್ಣನನ್ನಾಗಿಸುತ್ತದೆ. ಕೇವಲ ಶಿಕ್ಷಣಕ್ಕೆ ಅಂಟಿಕೊಂಡರೆ ಯಶಸ್ಸು ಸಾಧ್ಯವಿಲ್ಲ. ಹಾಗಾಗಿ ಪ್ರತಿಯೊಬ್ಬರು ಒಂದಲ್ಲಾ ಒಂದು ಕಲೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಪೋಷಕರು ತಮಗಿಷ್ಟವಾದ ಕೋರ್ಸ್ ಆಯ್ಕೆ ಮಾಡಿಕೊಳ್ಳುವಂತೆ ಮಕ್ಕಳಿಗೆ ಒತ್ತಡ ಹೇರದೆ ಅವರಿಗೆ ಇಷ್ಟವಾದ ಕ್ಷೇತ್ರದಲ್ಲಿ ಮುಂದುವರಿಯುವಂತೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಲಾ ಶಿಕ್ಷಕರಾದ ಕೆ. ಸುರೇಶ್, ವೀರಣ್ಣ ಕರಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: