ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿಯ ಮಾಜಿ ಸಂಸದ ಧನಂಜಯ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಆ. 3 : ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್‍ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಸಂಸದರಾಗಿದ್ದ ಮತ್ತು ಕೆಜೆಪಿ ಸೇರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಧನಂಜಯ್ ಕುಮಾರ್, ಕಳೆದ ಲೋಕಸಭಾ ಚುನಾವಣೆ ವೇಳೆ ಜೆಡಿಎಸ್‍ ಸೇರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‍ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಧನಂಜಯ ಕುಮಾರ್, ಕಾಂಗ್ರೆಸ್ ಪಕ್ಷ ಸೇರುವ ಕುರಿತು ಮಾತುಕತೆ ನಡೆಸಿದ್ದರು. ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಈ ವೇಳೆ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರುಗಳು ಹಾಜರಿದ್ದರು.

-ಎನ್.ಬಿ.

Leave a Reply

comments

Related Articles

error: