ಸುದ್ದಿ ಸಂಕ್ಷಿಪ್ತ

ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಆ. 4 – ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಆಗಸ್ಟ್ 4 ರಿಂದ 31ರವರೆಗೆ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು.ಆಗಸ್ಟ್ 4ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ, ಆಗಸ್ಟ್ 10ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ  ದೂರುಗಳನ್ನು ಸ್ವೀಕರಿಸುವರು.ಆಗಸ್ಟ್ 16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಳಂದೂರು, 22ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಕೊಳ್ಳೇಗಾಲ ಹಾಗೂ 30ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಹನೂರಿನಲ್ಲಿ  ದೂರುಗಳನ್ನು ಸ್ವೀಕರಿಸುವರು.   ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ  ಅಧಿಕಾರಿಗಳು ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: