ಸುದ್ದಿ ಸಂಕ್ಷಿಪ್ತ

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಆ. 4: – ಕೃಷಿ ಇಲಾಖೆಯು 2016-17ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

ಕೃಷಿ ಕ್ಷೇತ್ರದಲ್ಲಿ ವಿನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ, ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಸಂಶೋಧನೆ, ಸಾಧನೆಗಳು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಪ್ರಥಮ ಪ್ರಶಸ್ತಿಯು 1 ಲಕ್ಷ ರೂ. ನಗದು, ದ್ವಿತೀಯ ಪ್ರಶಸ್ತಿಯು 75 ಸಾವಿರ ರೂ., ತೃತೀಯ ಪ್ರಶಸ್ತಿಯು 50 ಸಾವಿರ ರೂ. ಒಳಗೊಂಡಿದೆ. ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿಗೆ ತಲಾ 25 ಸಾವಿರ ರೂ ನೀಡಲಾಗುತ್ತದೆ. ಎಲ್ಲಾ ಕೃಷಿಕರಿಗೂ ಮುಕ್ತ ಅವಕಾಶವಿದೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಜಲಾನಯನ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತರಾದ ಕುಟುಂಬದವರನ್ನು ಹೊರತುಪಡಿಸಿ ಉಳಿದ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನೂ ಸಹ  ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಅರ್ಜಿದಾರರ ಹೆಸರಿನಲ್ಲಿ ಪಹಣಿ ಪತ್ರ (ಭೂ ದಾಖಲೆ, ಆರ್‍ಟಿಸಿ) ಕಡ್ಡಾಯ. ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ ಅಥವಾ ಸಾಧನೆಗಾಗಿ ಕೇಂದ್ರ, ರಾಜ್ಯ ಸರ್ಕಾರದಿಂದ ಸಮಾನಾಂತರ ಪ್ರಶಸ್ತಿ ಪಡೆದಿರುವವರು ಮತ್ತೆ ಸ್ಪರ್ಧಿಸುವಂತಿಲ್ಲ.

ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಆಗಸ್ಟ್ 10ರ ಒಳಗೆ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

Check Also

Close
error: