ಕರ್ನಾಟಕ

ಜಿಲ್ಲಾ ಯೋಜನಾ ಸಮಿತಿ ಚುನಾವಣೆ : ವೇಳಾಪಟ್ಟಿ ಪ್ರಕಟ

ರಾಜ್ಯ(ಚಾಮರಾಜನಗರ)ಆ.4:- ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸುವ ಸಂಬಂಧ ವೇಳಾಪಟ್ಟಿಯನ್ನು ಜಿಲ್ಲಾ ಯೋಜನಾ ಸಮಿತಿಯ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಪ್ರಕಟಿಸಿದ್ದಾರೆ.

ಜಿಲ್ಲಾ ಯೋಜನಾ ಸಮಿತಿಗೆ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾ, ತಾಲೂಕು ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಕ್ಷೇತ್ರದಿಂದ ಚುನಾಯಿತರಾದ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಬೇಕಿದೆ. ಗ್ರಾಮೀಣ ಸಂಸ್ಥೆಗಳಿಂದ 33 ಸದಸ್ಯರನ್ನು ನಗರಸಭೆ ಸಂಸ್ಥೆಗಳಿಂದ 7 ಸದಸ್ಯರನ್ನು ಆಯ್ಕೆ ಮಾಡಬೇಕಿದೆ. ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳಿಂದ 2015-16ನೇ ಸಾಲಿನಲ್ಲಿ ಇಬ್ಬರು ಸದಸ್ಯರು ಆಯ್ಕೆಯಾಗಿದ್ದಾರೆ. ಉಳಿದ 5 ಸದಸ್ಯರನ್ನು ನಗರ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆ ಮಾಡಬೇಕಿದೆ.

ನಾಮನಿರ್ದೇಶನಗಳನ್ನು ಸಲ್ಲಿಸುವ ಅವಧಿಯು ಆಗಸ್ಟ್ 4ರಂದು ಬೆಳಿಗ್ಗೆ 11 ಗಂಟೆಯಿಂದ ಆಗಸ್ಟ್ 11ರ ಶುಕ್ರವಾರ ಮಧ್ಯಾಹ್ನ 3 ಗಂಟೆವರೆಗೆ (ದಿನಾಂಕ 6.8.2017ರ ಭಾನುವಾರ ಹೊರತುಪಡಿಸಿ) ಇರಲಿದೆ. ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮನಿರ್ದೇಶನ ಹಿಂತೆಗೆದುಕೊಳ್ಳಲು ಆಗಸ್ಟ್ 17ರ ಮದ್ಯಾಹ್ನ 3 ಗಂಟೆಯವರೆಗೆ ಕಾಲಾವಕಾಶವಿದೆ. ಆಗಸ್ಟ್ 29ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 29ರಂದು ಸಂಜೆ 4.15 ಗಂಟೆಗೆ ಮತಗಳ ಎಣಿಕೆ ನಡೆಯಲಿದೆ. ಆಗಸ್ಟ್ 30ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: