ಕರ್ನಾಟಕ

ಶೂನ್ಯ ಬಡ್ಡಿ ದರದ ಸಾಲ ಸೌಲಭ್ಯ ರೈತರು ಸದುಪಯೋಗಪಡಿಸಿಕೊಳ್ಳಿ : ವಿ.ಡಿ.ಹರೀಶ್

ರಾಜ್ಯ(ಮಂಡ್ಯ)ಆ.4:- ಸಹಕಾರ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿ.ಡಿ.ಹರೀಶ್ ಹೇಳಿದರು.
ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಿರುವ ಗೋದಾಮು ಮತ್ತು ವಾಣಿಜ್ಯ ಮಳಿಗೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದದರು. ದೇಶದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಕೇವಲ ಸಹಕಾರ ಸಂಘಗಳ ಮೂಲಕ ಮಾತ್ರ ರೈತರಿಗೆ ಸಾಲ ನೀಡುವ ವ್ಯವಸ್ಥೆ ಇದೆ. ಇದನ್ನು ಎಲ್ಲಾ ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಖಾಸಗಿ ಲೇವಾದೇವಿಗಾರರಿಂದ ಮೀಟರ್ ಬಡ್ಡಿ ದರದಲ್ಲಿ ಸಾಲ ತಂದು ತೊಂದರೆಗೆ ಸಿಲುಕಬಾರದು. ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒಡವೆ ಸಾಲವನ್ನು ಸಹಕಾರ ಸಂಘಗಳ ಮೂಲಕ ನೀಡಲಾಗುತ್ತದೆ. ಹಾಗಾಗಿ ರೈತರ ಜೀವನಾಡಿಯಾಗಿರುವ ಸಹಕಾರ ಸಂಘಗಳಲ್ಲಿ ರಾಜಕೀಯ ನುಸುಳದಂತೆ ನೋಡಿಕೊಳ್ಳಬೇಕು ಎಂದರು.
ಸಂಘದ ಅಧ್ಯಕ್ಷ ಅಡಿಕೆ ಸ್ವಾಮೀಗೌಡ, ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಜವರಾಯಿಗೌಡ, ಸಂಘದ ಸಿಇಒ ಜೆ.ಎನ್.ಮಹೇಶ್, ಪಾಂಡವಪುರ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಬಿ.ಬೋಳೇಗೌಡ, ಜಿ.ಪಂ.ಮಾಜಿ ಸದಸ್ಯೆ ಸರ್ವಮಂಗಳಾ ವೆಂಕಟೇಶ್, ತಾ.ಪಂ.ಸದಸ್ಯೆ ಮೀನಾಕ್ಷಿಪುಟ್ಟರಾಜು ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: