ಕರ್ನಾಟಕಪ್ರಮುಖ ಸುದ್ದಿ

ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಆ.4-ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕೆ.ಎ.ಎಸ್. (ಹಿರಿಯ ಶ್ರೇಣಿ/ ಕಿರಿಯ ಶ್ರೇಣಿ) ಹತ್ತು ಅಧಿಕಾರಿಗಳನ್ನು ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ಜಂಟಿ ನಿರ್ದೇಶಕ (ಆಡಳಿತ) ರಾಗಿದ್ದ ಎ.ಬಿ.ಬಸವರಾಜು ಅವರನ್ನು ನಗರಾಭಿವೃದ್ಧಿ ಇಲಾಖೆಗೆ, ಮಡಿಕೇರಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದ ಎಂ.ಸತೀಶ್ ಕುಮಾರ್ ಅವರನ್ನು ಬೆಂಗಳೂರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಲ್ಲಿ ಖಾಲಿ ಇದ್ದ ಸರ್ಕಾರದ ಉಪಕಾರ್ಯದರ್ಶಿ (ಗಣಿ)ಯಾಗಿ, ಬೆಂಗಳೂರು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಪರ ನಿರ್ದೇಶಕರಾಗಿದ್ದ ಶಾಂತಾ ಎಲ್.ಹುಲ್ಮನಿ ಅವರನ್ನು ಹಾವೇರಿ ಜಿಲ್ಲೆಯಲ್ಲಿ ಖಾಲಿ ಇದ್ದ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ನೇಮಿಸಿ ವರ್ಗಾಯಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ಎಂ.ಕೆ.ಜಗದೀಶ್ ಅವರನ್ನು ರಂಗನಾಥ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಬೆಂಗಳೂರು ಉಪವಿಭಾಗಾಧಿಕಾರಿಯಾಗಿ, ಬೆಂಗಳೂರು ಉತ್ತರ ವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ರಂಗನಾಥ್ ಅವರನ್ನು ಡಾ.ಬಿ.ಆರ್.ಹರೀಶ್ ಅವರ  ವರ್ಗಾವಣೆಯಿಂದ ತೆರವಾಗಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ, ನಗರಾಭಿವೃದ್ಧಿ ಮತ್ತು ಹಜ್ ಸಚಿವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಆರ್.ಲೋಕನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿ, ಹಾವೇರಿ ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿದ್ಧ ಬಸವರಾಜ್ ಆರ್. ಸೋಮಣ್ಣನವರ್ ಅವರನ್ನು ತುಮಕೂರು-ರಾಯದುರ್ಗ ಮತ್ತು ತುಮಕೂರು-ದಾವಣಗೆರೆ ರೈಲ್ವೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಿಸಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿದ್ದ ಎಸ್.ಎಂ.ಮಂಗಳ ಅವರನ್ನು ಕೆಐಎಡಿಬಿ ಸಹಾಯಕ ಆಯುಕ್ತರಾಗಿ, ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ಉಪವಿಭಾಗಾಧಿಕಾರಿಯಾಗಿದ್ದ ಟಿ.ವಿ.ಪ್ರಕಾಶ್ ಅವರನ್ನು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಸಿಂಗಟಲೂರು ಏತ ನೀರಾವರಿ ಯೋಜನೆಯ ವಿಶೇಷ ಭೂಸ್ವಾಧೀನಧಿಕಾರಿಯಾಗಿ, ದಾವಣಗೆರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಜಿ.ನಜ್ಮಾ ಅವರನ್ನು ಹರಪ್ಪನಹಳ್ಳಿಯ ಉಪವಿಭಾಗಾಧಿಕಾರಿಯಾಗಿ ನೇಮಿಸಿ ವರ್ಗಾಯಿಸಲಾಗಿದೆ. (ವರದಿ-ಎಸ್.ಎನ್, ಎಂ.ಎನ್)

 

 

Leave a Reply

comments

Related Articles

error: