
ಮೈಸೂರು
ಅನಧಿಕೃತ ಜೂಜು ಅಡ್ಡೆಯ ಮೇಲೆ ದಾಳಿ : 21 ಮಂದಿ ಬಂಧನ: 1,45,800ರೂ ವಶ
ಮೈಸೂರು,ಆ.4:- ಅನಧಿಕೃತವಾಗಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು 21ಜನರನ್ನು ಬಂಧಿಸಿದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸೆಲ್ ಪ್ಲ್ಯಾಂಟ್ ರಸ್ತೆಯಲ್ಲಿರುವ ಖಾಸಗಿ ಶೆಡ್ ನಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ವಿದ್ಯಾರಣ್ಯಪುರಂ ಠಾಣೆಯ ಪೊಲೀಸರು ದಾಳಿ ನಡೆಸಿ 21ಮಂದಿಯನ್ನು ಬಂಧಿಸಿದ್ದಲ್ಲದೇ, 1.45,800ರೂ, 20 ಮೊಬೈಲ್, ಮೂರು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ಮೈಸೂರಿನ ವಿವಿಧ ಬಡಾವಣೆಗೆ ಸೇರಿದವರು ಎಂದು ತಿಳಿದು ಬಂದಿದೆ. ವಿದ್ಯಾರಣ್ಯಪುರಂ ಠಾಣೆಯ ಇನ್ಸಪೆಕ್ಟರ್ ಓಂಕಾರಪ್ಪ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ಕಾರ್ಯಾಚರಣೆಯನ್ನು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ಶ್ಲಾಘಿಸಿದ್ದಾರೆ. (ಕೆ.ಎಸ್,ಎಸ್.ಎಚ್)