ಪ್ರಮುಖ ಸುದ್ದಿ

ಮೂವರು ಎಲ್ ಇಟಿ ಉಗ್ರರ ಹತ್ಯೆ

ಬಾರಾಮುಲ್ಲಾ (ಜಮ್ಮು-ಕಾಶ್ಮೀರ): ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಮೂವರು ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿರುವ ಅಮರ್ಘಾಡ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸೇನಾ ಪಡೆ ಹಾಗೂ ಸಿಆರ್ ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದವು. ಈ ವೇಳೆ ಉಗ್ರರು ಸೇನಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಕಾರ್ಯಾಚರಣೆ ಚುರುಕುಗೊಳಿಸಿದ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸುತ್ತಿದ್ದ ಮೂವರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿವೆ. ಕಾರ್ಯಾಚರಣೆ ವೇಳೆ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ. (ವರದಿ ಬಿ.ಎಂ)

Leave a Reply

comments

Related Articles

error: