ದೇಶಪ್ರಮುಖ ಸುದ್ದಿಮೈಸೂರು

ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ

ಬೆಂಗಳೂರು: ಮಾಜಿ ಸಚಿವ ಶ್ರೀನಿವಾಸ ಪ್ರಸಾದ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನಸಭೆ ಸ್ಪೀಕರ್ ಕೆ.ಬಿ. ಕೋಳಿವಾಡ ಅವರು ಗುರುವಾರ ಅಂಗೀಕರಿಸಿದ್ದಾರೆ. ಸಂಪುಟ ಪುನಾರಚನೆ ಸಂದರ್ಭ ತಮ್ಮನ್ನು ಕೈಬಿಟ್ಟಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಮುನಿಸಿಕೊಂಡಿರುವ ಪ್ರಸಾದ್ ಅವರು ಕಳೆದ ಸೋಮವಾರ (ಅ 17) ರಾಜೀನಾಮೆ ನೀಡಿದ್ದರು.

ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಸ್ಪೀಕರ್‌ ಕೋಳಿವಾಡ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು, ಪ್ರಸಾದ್ ಅವರು ಬಯಸಿದರೆ ಮೂರು ದಿನದೊಳಗೆ ರಾಜೀನಾಮೆ ಹಿಂಪಡೆಯಬಹುದು ಎಂದು ಹೇಳಿದ್ದಾರೆ. ಶ್ರೀನಿವಾಸ ಪ್ರಸಾದ್ ರಾಜೀನಾಮೆ ಸಲ್ಲಿಸಿ ಮೂರು ದಿನದ ಬಳಿಕ ರಾಜೀನಾಮೆ ಅಂಗೀಕರಿಸಲಾಗಿದೆ.

Leave a Reply

comments

Related Articles

error: