ಮೈಸೂರು

ನಾಯಕ ಜನಾಂಗದ ವಧೂ-ವರರ ಮುಖಾಮುಖಿ ಸಂದರ್ಶನ ಕಾರ್ಯಕ್ರಮ

ಕರ್ನಾಟಕ ರಾಜ್ಯ ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯು ನಾಯಕ ಜನಾಂಗದ ವಧೂ-ವರರ ಮುಖಾಮುಖಿ ಸಂದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಅ.27 ರ ಬೆ. 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಾಯಕ ಜನಾಂಗದ ವಧೂ-ವರರ ಮುಖಾಮುಖಿ ಸಂದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು. ಇಚ್ಛೆಯುಳ್ಳವರು ಇತ್ತೀಚಿನ ಭಾವಚಿತ್ರ, ಸ್ವವಿವರಗಳನ್ನು ನಂ.48, ನಾಯಕರ ಬೀದಿ, ಚಾಮುಂಡಿ ಬೆಟ್ಟ, ಮೈಸೂರು – ಇಲ್ಲಿಗೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 90196 50315 ಗೆ ಸಂಪರ್ಕಿಸಬಹುದಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು ಜಿಲ್ಲಾಧ್ಯಕ್ಷ ಶ್ರೀಧರ, ಚಾಮುಂಡಿಬೆಟ್ಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹುಣಸೂರು, ರಾಜ್ಯ ಉಪಾಧ್ಯಕ್ಷ ಮಧುವನ ಚಂದ್ರು, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಯಡಕೊಳ ಮತ್ತಿತರರು ಹಾಜರಿದ್ದರು.

Leave a Reply

comments

Related Articles

error: