ಮೈಸೂರು

ಜನಲೋಕಪಾಲ ಮಸೂದೆಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು,ಆ.7-ಕೇಂದ್ರ ಸರ್ಕಾರ ಜನಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ಪಡುವಾರಹಳ್ಳಿ ಶ್ರೀಗಂಧ ಯುವಕರ ಸಂಘದವರು ಸೋಮವಾರ ನಗರದ ನ್ಯಾಯಾಲಯದ ಎದುರಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಐತಿಹಾಸಿಕ ಕ್ರಮವಾಗಿ ಜನಲೋಕಪಾಲ ಮಸೂದೆಯನ್ನು ಜಾರಿಗೆ ತರುವುದಾಗಿ ಹೇಳಿದ್ದರು. ಪ್ರಧಾನಿಯಾಗಿ ಮೂರ ವರ್ಷಗಳಾಗುತ್ತ ಬಂದರೂ ಮಸೂದೆ ಜಾರಿಗೆ ಯಾವುದೇ ಕ್ರಮಕೈಗೊಂಡಿಲ್ಲ. ದೇಶದ ಸರ್ವತೋಮುಖ ಪ್ರಗತಿಗೆ, ಜನರ ಹಿತಾಸಕ್ತಿಗೆ ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಪಾಲ್ ಮಸೂದೆ ಜಾರಿಗೆ ತರಬೇಕೆಂದು ಆಗ್ರಹಿಸಿದರು. (ವರದಿ-ಎಚ್.ಎನ್, ಎಂ.ಎನ್)

 

Leave a Reply

comments

Related Articles

error: