ಮೈಸೂರು

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು, ಆ.೭: ವಿದ್ಯಾರಣ್ಯಪುರಂನ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಕರುಮಾರಿಯಮ್ಮನವರ ದೇವಸ್ಥಾನ ಟ್ರಸ್ಟ್‌ನ ೮೭ನೇ ವರ್ಷದ ಕರಗ ಮಹೋತ್ಸವದ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಶಾಸಕ ಸೋಮಶೇಖರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲಿಯೂ ಒಂದಲ್ಲಾ ಒಂದು ಪ್ರತಿಭೆ ಇz ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ. ಅಂತಹ ಶ್ಲಾಘನೀಯ ಕಾರ್ಯವನ್ನು ದೇವಸ್ಥಾನದ ಟ್ರಸ್ಟ್ ಮಾಡುತ್ತಿದೆ. ಕೇವಲ ಧಾರ್ಮಿಕ ಸೇವೆಗೆ ಸೀಮಿತವಾಗದೆ ಸಾಮಾಜಿಕ, ಶೈಕ್ಷಣಿಕ ಕಾರ್ಯದಲ್ಲಿಯೂ ತೊಡಗಿಕೊಂಡು ಸೇವೆ ಸಲ್ಲಿಸುತ್ತಿರುವುದು ಉತ್ತಮ ಕಾರ್ಯ. ಇಂತಹ ಕಾರ್ಯಗಳು ಮತ್ತಷ್ಟು ಆಗಬೇಕಿದೆ ಎಂದು ಹೇಳಿದರು.
ಇದೇ ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯರಾದ ಸುನೀಲ್, ಆಶೋಕ್‌ಕುಮಾರ್, ಊಮಾಮಣಿ, ರತ್ನಮ್ಮ, ಮಾ.ವಿ.ರಾಮ್‌ಪ್ರಸಾದ್, ಎಸ್‌ಎಂ.ಪಿ.ಶಿವಪ್ರಕಾಶ್, ಟ್ರಸ್ಟ್‌ನ ಅಧ್ಯಕ್ಷರಾದ ಸತ್ಯನಾರಾಯಣಸ್ವಾಮಿ, ಉಪಾಧ್ಯಕ್ಷ ಎಸ್.ಎನ್.ಪುರಷೋತ್ತಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: