ಕರ್ನಾಟಕ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಕಾಮಕ

ರಾಜ್ಯ(ವಿಜಯಪುರ)ಆ.8:- ಕಾಮಕನೋರ್ವ  ಅಪ್ರಾಪ್ತೆ ಮೇಲೆ ಅತ್ಯಾಚಾರ ವೆಸಗಿದ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಆಸಂಗಿಹಾಳ ಗ್ರಾಮದಲ್ಲಿ ನಡೆದಿದೆ.

ಚಾಂದ್ ಪಟೇಲ (45)  ಎಂಬಾತನೇ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಕಾಮುಕನಾಗಿದ್ದಾನೆ. 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ವೆಸಗಿ ಪರಾರಿಯಾಗಿದ್ದು, ಬಾಲಕಿ ಮಾನಸಿಕ ಅಸ್ವಸ್ಥೆಯಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಆಲಮೇಲ‌ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾಮುಕ ಚಾಂದ್ ಪಟೇಲ್ ಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: