ಸುದ್ದಿ ಸಂಕ್ಷಿಪ್ತ

ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಆ.8:- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಸ್ತೆ ಅಪಘಾತದ ಸಂಕಷ್ಟ ಪರಿಸ್ಥಿತಿಯಲ್ಲಿ ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಕೊಡಿಸಲು ನೆರವಾದವರಿಗೆ ನೀಡಲಾಗುವ ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

ಅಪಘಾತ ಸಂದರ್ಭ ವ್ಯಕ್ತಿಗಳು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲು ನೆರವಾಗಲೆಂದು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಶಸ್ತಿ ನೀಡಲಾಗುತ್ತದೆ. ಅಪಘಾತದ ಗಾಯಾಳುಗಳಿಗೆ ಸಹಾಯ ಮಾಡಲು ಶ್ರಮಿಸಿರುವ ಯಾವುದೇ ವಯಸ್ಸಿನ ವ್ಯಕ್ತಿ ಪ್ರಶಸ್ತಿಗಾಗಿ ಸ್ವಯಂ ಅಥವಾ ಸಾಕ್ಷಿಯಾದ ವ್ಯಕ್ತಿಯಿಂದ ನಾಮಕರಣಗೊಳ್ಳಬಹುದಾಗಿದೆ. ಪ್ರಶಸ್ತಿಗೆ ಆಯ್ಕೆಯಾದವರನ್ನು ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 10 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕರು ಅಥವಾ ಆಯಾ ತಾಲೂಕು ಆರೋಗ್ಯ ಮಿತ್ರರನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 7259003402 ಅಥವಾ 7259003426 (ಪುಟ್ಟೇಗೌಡ) ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಎಚ್. ಪ್ರಸಾದ್ ತಿಳಿಸಿದ್ದಾರೆ.

Leave a Reply

comments

Related Articles

Check Also

Close
error: