ಮೈಸೂರು

ಸ್ಥಳೀಯ ಗುತ್ತಿಗೆದಾರರಿಗೆ ಅವಕಾಶ ನೀಡಲು ಕ್ರಮ: ಮೇಯರ್

ಟೆಂಡರ್ ನಿಯಮ ಸುಲಭಗೊಳಿಸಿ ಸ್ಥಳೀಯ ಗುತ್ತಿಗೆದಾರರಿಗೆ ದೊಡ್ಡ ಕಾಮಗಾರಿಗಳ ಟೆಂಡರ್ ನೀಡುವಂತೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಮೇಯರ್ ಬಿ.ಎಲ್. ಭೈರಪ್ಪ ಹೇಳಿದರು.

ಮಹಾ ನಗರ ಪಾಲಿಕೆಯ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಾರ್ಡ್‍ವಾರು ಲಕ್ಷಾಂತರ ರೂ. ವೆಚ್ಚದ ಕಾಮಗಾರಿಗಳನ್ನು ಕ್ರೋಢೀಕರಿಸಿ ಪ್ಯಾಕೆಜ್ ಗುತ್ತಿಗೆಯನ್ನು ನೀಡಲಾಗುತ್ತಿದೆ. ಇದರ ಕೆಲ ನಿಯಮಗಳಿಂದ ಸ್ಥಳೀಯ ಗುತ್ತಿಗೆದಾರರಿಗೆ ಯಾವುದೇ ಅವಕಾಶ ಸಿಗುತ್ತಿಲ್ಲ. ಗುತ್ತಿಗೆದಾರರ ಬೇಡಿಕೆಗಳನ್ನು ಪರಿಶೀಲಿಸಿ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿ, ಸರಕಾರಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದರು.
ಮೂರು ವರ್ಷಗಳಿಂದ ಗುತ್ತಿಗೆದಾರರಿಗೆ ಪಾಲಿಕೆ 110 ಕೋಟಿ ರೂ. ಬಾಕಿ ಕೊಡಬೇಕಿದೆ. ಈ ಬಾಕಿ ಪಾವತಿಸುವಂತೆ ಗುತ್ತಿಗೆದಾರರು ಕೋರಿದ್ದಾರೆ. ಅದನ್ನು ಸಹ ಪರಿಗಣಿಸಲಾಗುವುದು ಎಂದರು.

ದೇವರಾಜ ಮಾರುಕಟ್ಟೆ ಒಡೆಯದಂತೆ ತಡೆಯಾಜ್ಞೆ:

ದೇವರಾಜ ಮಾರುಕಟ್ಟೆ ಶಿಥಿಲವಾಗಿರುವುದರಿಂದ ಕೆಡವುವುದು ಅನಿವಾರ್ಯವಾಗಿದೆ. ವ್ಯಾಪಾರಿಯೊಬ್ಬರು ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Leave a Reply

comments

Related Articles

error: