ಮೈಸೂರು

ಶ್ರೀರಾಮುಲು ಜನ್ಮದಿನದ ಪ್ರಯುಕ್ತ ಅಭಿಮಾನಿಗಳ ಬಳಗದ ವತಿಯಿಂದ ಹಣ್ಣು ಹಂಪಲು ವಿತರಣೆ

ಮೈಸೂರು,ಆ.8:- ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಸ್ವಾಭಿಮಾನಿ ಬಿ.ಶ್ರೀರಾಮುಲುರವರ 46 ನೇ ಹುಟ್ಟು ಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಹಾಗೂ ಶ್ರೀರಾಮುಲು ಅಭಿಮಾನಿಗಳ ಬಳಗದ ವತಿಯಿಂದ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ನಗರದ ಶಕ್ತಿಧಾಮ ಮಹಿಳಾ ಪುನರ್ ವಸತಿ ಕೇಂದ್ರದಲ್ಲಿ ಮಹಿಳೆಯರಿಗೆ ದ್ಯಾವಪ್ಪ ನಾಯಕ ಹಣ್ಣು ಹಂಪಲನ್ನು ವಿತರಿಸಿದರು. ಇದೇ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀ ರಾಮುಲು ನಾಯಕ ಜನಾಂಗದವರು. ರಾಜಕೀಯದಲ್ಲಿ ಹಂತ ಹಂತವಾಗಿ ಬೆಳಯುತ್ತಿದ್ದಾರೆ.  ಈ ರಾಜ್ಯದ ಬಡವರು,ದೀನ ದಲಿತರು, ಹಿಂದುಳಿದವರು,ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಶ್ರಮಿಸುವ ಶಕ್ತಿಯನ್ನು ಕೊಟ್ಟು, ಶ್ರೀ ಚಾಮುಂಡೇಶ್ವರಿ ಆಯುಷ್ಯ, ಆರೋಗ್ಯ, ಸಂಪತ್ತನ್ನು ಕೊಟ್ಟು ಮುಂಬರುವ 2018ರ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾಗಿ ಬರಬೇಕೆಂದು ಆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹುಣಸೂರು, ಶ್ರೀಧರ್ ಚಾಮುಂಡಿಬೆಟ್ಟ, ಪಡುವಾರಹಳ್ಳಿ ಎಂ.ರಾಮಕೃಷ್ಣ, ತಿಮ್ಮನಾಯಕ, ಎಂ.ಶಿವಪ್ರಕಾಶ್ ,ವಿನೋದ್, ಶಿವು ,ರಾಜು ಮಾರ್ಕೆಟ್, ರಮೇಶ್,ಸುರೇಶ್ ಕುಮಾರ ಬೀಡು ಸೇರಿದಂತೆ ಮತ್ತಿತರರು ಹಾಜರಿದ್ದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: