
ಮಂಡ್ಯ, ಆ.8 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆಯನ್ನು ಮಂಡ್ಯ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 2017-18 ನೇ ಸಾಲಿನಲ್ಲಿ 334219 ಮಕ್ಕಳು ನೊಂದಣಿಯಾಗಿದ್ದು, ಆಗಸ್ಟ್ 10 ರಂದು 1 ರಿಂದ 19 ವರ್ಷ ವಯಸ್ಸಿನ ಎಲ್ಲಾ ಅಂಗನವಾಡಿ ಕೇಂದ್ರ, ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು ಹಾಗೂ ಕಾಲೇಜಿನ ಮಕ್ಕಳಿಗೆ ಒಂದೇ ದಿನದಂದು ಜಂತುಹುಳು ನಿವಾರಣೆಯಾದ ಆಲ್ಬೆಂಡಾಜೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು.
ಆಗಸ್ಟ್ 10 ರಂದು ಗೈರು ಹಾಜರಾದ ಮಕ್ಕಳಿಗೆ ಆಗಸ್ಟ್ 17 ರಂದು ಮಾತ್ರೆಯನ್ನು ನೀಡಲಾಗುವುದು. ಜಿಲ್ಲೆಯ ಎಲ್ಲಾ ಮಕ್ಕಳ ಪೋಷಕರು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
-ಎನ್.ಬಿ.