ಸುದ್ದಿ ಸಂಕ್ಷಿಪ್ತ

ಆ.09 ರಂದು ಗಿರಿ ಸಂರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮ

ಮಡಿಕೇರಿ, ಆ.8: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಗರಸಭೆ, ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ, ರೋಟರಿ ಕ್ಲಬ್, ಚೇಂಬರ್ ಆಫ್ ಕಾಮರ್ಸ್, ಗ್ರೀನ್ ಸಿಟಿ ಫಾರಂ, ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಲಯನ್ಸ್, ಲಯನೆಸ್ ಕ್ಲಬ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಮಹಿಳೋದಯ ಮಹಿಳಾ ಒಕ್ಕೂಟ, ಟೈಲರ್ಸ್ ಅಸೋಸಿಯೇಷನ್ ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ಆರ್ಗನೈಜೇಷನ್ ಫಾರ್ ದ ಡೆವಲಪ್‍ಮೆಂಟ್ ಆಫ್ ಪೀಪಲ್(ಓ.ಡಿ.ಪಿ) ವತಿಯಿಂದ ಮಡಿಕೇರಿ ಗಿರಿ ಸಂರಕ್ಷಣಾ ಬಳಗದ ಮೂಲಕ ಆಗಸ್ಟ್, 09 ರಂದು ಬೆಳಗ್ಗೆ 10 ಗಂಟೆಗೆ ನಗರದ ನೆಹರು ಮಂಟಪದಲ್ಲಿ ಗಿರಿ ಸಂರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾಸ್ಟರ್ ಆರ್‍ಕೆಜಿಎಂಎಂ ಮಹಾಸ್ವಾಮೀಜಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಸೆಲ್ವಕುಮಾರ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ನಗರಸಭೆ ಉಪಾಧ್ಯಕ್ಷರಾದ ಟಿ.ಎಸ್.ಪ್ರಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಮೈಸೂರು ಓ.ಡಿ.ಪಿ. ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಸ್ಟ್ಯಾನಿ ಡಿ ಅಲ್ಮಡಾ  ಇತರರು ಪಾಲ್ಗೊಳ್ಳಲಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: