ಕರ್ನಾಟಕಪ್ರಮುಖ ಸುದ್ದಿ

ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ ಕತ್ತಿನವರೆಗೂ ಮಣ್ಣು ಹಾಕಿಕೊಂಡು ಪ್ರತಿಭಟನೆ

ರಾಜ್ಯ (ಮಂಡ್ಯ) ಆ.9:- ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಮಂಡ್ಯ ಜಿಲ್ಲೆ ಮದ್ದೂರಮ್ಮನ ಕೆರೆಯಲ್ಲಿ  ಕನ್ನಡ ಜನಪರ ವೇದಿಕೆ ಸದಸ್ಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಕತ್ತಿನವರೆಗೂ ಮಣ್ಣು ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಇವರ ಹೋರಾಟ 34ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರೈತರಿಗೆ ಕವಡೆ ಕಾಸಿನ ಕಿಮ್ಮತ್ತನ್ನೂ ನೀಡುತ್ತಿಲ್ಲ. ರೈತರ ನಾಲೆಗಳಿಗೆ ನೀರು ಹರಿಸಿ ಎಂದರೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಈಗ ತಮಿಳುನಾಡಿಗೆ ನೀರಿನ ಅವಶ್ಯಕತೆ ಹೆಚ್ಚಿದೆಯೋ ಅಥವಾ ನಮ್ಮ ರೈತರಿಗೆ ನೀರಿನ ಅವಶ್ಯಕತೆ ಹೆಚ್ಚಿದೆಯೋ ಎಂದು ವಾಗ್ದಾಳಿ ನಡೆಸಿದರು.  ಸಭೆಯಲ್ಲಿ ನಾಲೆಗಳಿಗೆ ನೀರು ಬಿಡುವ ತೀರ್ಮಾನ ಕೈಗೊಂಡರೆ ಹೊರಕ್ಕೆ ಬರುತ್ತೇನೆ ಇಲ್ಲದಿದ್ದಲ್ಲಿ ಒಳಕ್ಕೆ ಹೋಗುತ್ತೇನೆ ಎಮದು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: