ಕರ್ನಾಟಕಪ್ರಮುಖ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಖೀ ಕಟ್ಟಿದ ಜೈನ್ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷೆ

ರಾಜ್ಯ(ಬೆಂಗಳೂರು)ಆ.9:-ರಕ್ಷಾಬಂಧನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶ್ರವಣಬೆಳಗೊಳ ಗೊಮ್ಮಟೇಶ್ವರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ರಾಷ್ಟ್ರ ಮಟ್ಟದ ದಿಗಂಬರ ಜೈನ ವ್ಯವಸ್ಥಾಪಕ ಸಮಿತಿಯ-2018ರ ರಾಷ್ಟ್ರೀಯ ಅಧ್ಯಕ್ಷೆ  ಸರಿತಾಎಂ.ಕೆ.ಜೈನ್‍ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ರಾಖಿ ಕಟ್ಟಿದರು. ಬಳಿಕ ಹಣೆಗೆ ತಿಲಕವಿರಿಸಿ, ಸಿಹಿ ತಿನ್ನಿಸುವ ಮೂಲಕ ರಕ್ಷಾಬಂಧನವನ್ನು ಮುಖ್ಯಮಂತ್ರಿಗಳ ಜೊತೆ ಆಚರಿಸಿದರು.

ಈ ಸಂದರ್ಭ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾದ ಹೆಚ್.ಬಿ.ಮದನಗೌಡ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: