ಕರ್ನಾಟಕಪ್ರಮುಖ ಸುದ್ದಿಮೈಸೂರು

ಮೈಸೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ಬೃಹತ್ ಉದ್ಯೋಗ ಮೇಳ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ(ಬೆಂಗಳೂರು)ಆ.9:- ಮೈಸೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರ ಅನುಕೂಲಕ್ಕಾಗಿ  ಬೃಹತ್ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಚಾಮರಾಜನಗರ,ಮೈಸೂರು  ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಿ ಎಂದು ಇದೇ ಸಂದರ್ಭ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಮೈಸೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಕಾರ್ಖಾನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗಿವೆ. ಅಲ್ಲಿ ಸ್ಥಳೀಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸಿಗುವಂತಾಗಬೇಕು ಎಂದು ಹೇಳಿದರು. ಇದೇ ವೇಳೆ  ಕೌಶಲ್ಯ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ನಡೆಸಲು, ಕೌಶಲ್ಯ ತರಬೇತಿ ಮೇಳ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಐಟಿ-ಬಿಟಿ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಮತ್ತಿತರರು  ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: