ಸುದ್ದಿ ಸಂಕ್ಷಿಪ್ತ

ಆ.11:  ಅರಣ್ಯ ಸಚಿವರ ಭೇಟಿ

ಮಡಿಕೇರಿ ಆ.9 :- ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಾನ್ಯ ಸಚಿವ ಬಿ.ರಮಾನಾಥ ರೈ ಆ.11 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯುವ ಕರ್ನಾಟಕ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ 2016-17ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: