ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಮಡಿಕೇರಿ ಆ.9(-ಪ್ರಸಕ್ತ(2017-18ನೇ) ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ. ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಮತ್ತು ಬೌದ್ಧ ಜನಾಂಗದ ಜಿಎನ್‍ಎಂ/ಬಿಎಸ್ಸಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಠ ರೂ.35 ಸಾವಿರಗಳ ಅನುದಾನವನ್ನು ನೀಡಲಾಗುವುದು. ಈ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇಚ್ಛೆಯುಳ್ಳ ವಿದ್ಯಾರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿಗೆ ಸಹಾಯಧನಕ್ಕಾಗಿ ಕೋರಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಹಾಗೂ ದೂರವಾಣಿ ಸಂಖ್ಯೆ: 08272-225628 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಕೆ.ವಿ.ಸುರೇಶ್ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: