ಸುದ್ದಿ ಸಂಕ್ಷಿಪ್ತ

ಆ.12 :- 26ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡೋತ್ಸವ

ಮಡಿಕೇರಿ ಆ.9:-ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಷಿಯೇಶನ್ ಆಫ್ ಇಂಡಿಯಾ, ಮಡಿಕೇರಿ ಘಟಕ, ಕೊಡಗು ಜಿಲ್ಲಾ ಯುವ ಒಕ್ಕೂಟ(ರಿ) ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್, 12 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ತಾಲ್ಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ಬೋಪಯ್ಯನವರ ಗದ್ದೆಯಲ್ಲಿ 26ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕೆ ಸಚಿವರಾದ ಪ್ರಮೋದ್ ಮಧ್ವರಾಜ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: