ಸುದ್ದಿ ಸಂಕ್ಷಿಪ್ತ

ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ ಆ.10: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರು ಡಿಪ್ಲೊಮೊ ಪಾಸಾದ ಅಭ್ಯರ್ಥಿಗಳಿಂದ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವೃತ್ತಿಗಳು: ಡಿಪ್ಲೊಮೊ ಏರೋನಾಟಿಕಲ್ ಎಂಜಿನಿಯರಿಂಗ್, ಡಿಪ್ಲೊಮೊ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್, ಡಿಪ್ಲೊಮೊ ಇನ್ ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಡಿಪ್ಲೊಮೊ ಇನ್ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್, ಅವ್ಯೊನಿಕ್ಸ್ ಎಂಜಿನಿಯರಿಂಗ್, ಡಿಪ್ಲೊಮೊ ಇನ್ ಸಿವಿಲ್ ಎಂಜಿನಿಯರಿಂಗ್, ಡಿಪ್ಲೊಮೊ ಕಂಪ್ಯೂಟರ್ ಸೈನ್ಸ್ ಎಂಡ್ ಎಂಜಿನಿಯರಿಂಗ್/ಇನ್ಫಾರ್‍ಮೇಷನ್ ಸೈನ್ಸ್ ಎಂಡ್ ಎಂಜಿನಿಯರಿಂಗ್/ಡಿಪ್ಲೊಮೊ ಇನ್ ಕಮರ್ಷಿಯಲ್ ಪ್ರಾಕ್ಟೀಸ್, ಡಿಪ್ಲೊಮೊ ಇನ್ ಮೆಟಲರ್ಜಿ ಎಂಜಿನಿಯರಿಂಗ್.

ಈ ಟ್ರೇಡ್‍ಗಳಲ್ಲಿ ಡಿಪ್ಲೊಮೊ ತೇರ್ಗಡೆ ಹೊಂದಿ ಪ್ರಾವಿಸನಲ್ ಅಂಕಪಟ್ಟಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಅಭ್ಯರ್ಥಿಯು ಭಾರತೀಯನಾಗಿರಬೇಕು.  ಅರ್ಜಿ ಸಲ್ಲಿಸಲು ಆಗಸ್ಟ್, 22 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: