ಸುದ್ದಿ ಸಂಕ್ಷಿಪ್ತ

ಆ.16 ರಿಂದ ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

ಮಡಿಕೇರಿ, ಆ.10: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್, 16 ರಂದು ಸೋಮವಾರಪೇಟೆ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ, ಆಗಸ್ಟ್, 17 ರಂದು ವಿರಾಜಪೇಟೆ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ ಹಾಗೂ ಆಗಸ್ಟ್, 18 ರಂದು  ಮಡಿಕೇರಿ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ(ಮೂರ್ನಾಡು ರಸ್ತೆ)ದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿ(08272-220797) ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: