ಮೈಸೂರು

ನ್ಯಾಯಾಂಗ ಆಡಳಿತ ತರಬೇತಿಗಾಗಿ ಅರ್ಜಿ ಆಹ್ವಾನ

ಮೈಸೂರು, ಆ.10 : ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಅವಧಿಯಲ್ಲಿಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 2,000 ರೂ. ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು ಹಾಗೂ ವರ್ಗ-1ರ ಅಭ್ಯರ್ಥಿಗಳಿಗೆ 3,50,000 ರೂ. ಹಾಗೂ 1 ವರ್ಷ ವಿನಾಯಿತಿ ಇರುತ್ತದೆ. 2ಎ, 3ಎ, 3ಬಿ ವರ್ಗದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2,50,000 ರೂ.ಗಳನ್ನು ಮೀರಿರಬಾರದು.

ಅರ್ಹ ಮತ್ತು ಆಸಕ್ತಿಯುಳ್ಳ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಾ. ಬಾಬು ಜಗಜೀವನರಾಂ ಭವನ, ಆದಿಪಂಪ ರಸ್ತೆ, ನಾರಾಯಣ ಸ್ವಾಮಿ ಬ್ಲಾಕ್, ಪಡುವಾರಹಳ್ಳಿ ಪೂರ್ವ ಬಡಾವಣೆ ಮೈಸೂರು ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 8 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ : 0821-2342917 ನ್ನು ಸಂಪರ್ಕಿಸುವುದು.

-ಎನ್.ಬಿ.

Leave a Reply

comments

Related Articles

error: