ಮೈಸೂರು

ದೇವರಾಜ ಮಾರುಕಟ್ಟೆ ಕಾಮಗಾರಿ: ಸಚಿವರೊಂದಿಗೆ ಚರ್ಚಿಸಲು ತೀರ್ಮಾನ

ಪಾರಂಪರಿಕ ಕಟ್ಟಡವಾದ ದೇವರಾಜ ಮಾರುಕಟ್ಟೆಯ ವ್ಯಾಪಾರಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಡೆಸುವಂತೆ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್‍ ಅವರೊಂದಿಗೆ ಚರ್ಚೆ ನಡೆಸಲು ವರ್ತಕರ ಸಂಘ ನಿರ್ಧರಿಸಿದೆ.

ದೇವರಾಜ ಮಾರುಕಟ್ಟೆ ವರ್ತಕರ ಸಂಘದಿಂದ ಶುಕ್ರವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು. ಇತ್ತೀಚಿಗೆ ನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ದೇವರಾಜ ಮಾರುಕಟ್ಟೆಯನ್ನು ಕೆಡವಲು ನಿರ್ಧರಿಸಿದ ಹಿನ್ನೆಲೆಯಲ್ಲಿ ವರ್ತಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ನಡೆಸುವ ಅವಶ್ಯಕತೆಯಿದೆ. ಅ. 22 ರಂದು ನಗರಕ್ಕೆ ರೋಷನ್ ಬೇಗ್ ಅವರು ಬರಲಿದ್ದು, ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಸಭೆಯಲ್ಲಿ ನಿರ್ಧರಿಸಿದರು.

ಮಾಜಿ ಮೇಯರ್ ನರಸಿಂಹ ಅಯ್ಯಂಗಾರ್, ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್, ಸಮಾಜ ಸೇವಕ ಬದರಿ ಪ್ರಸಾದ್, ನಾಗರಿಕ ಹಿತರಕ್ಷಣಾ ಸಮಿತಿಯ ಗೋವಿಂದ್ ರಾಜು ಮತ್ತು ವರ್ತಕರು ಭಾಗವಹಿಸಿದ್ದರು.

Leave a Reply

comments

Related Articles

error: