ಮೈಸೂರು

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 15 ರಂದು ವಿವಿಧ ಕಾರ್ಯಕ್ರಮ

ಮೈಸೂರು, ಆ.12 : ಜಿಲ್ಲಾಡಳಿತದ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪ್ಪ ಪಂಜಿನ ಕವಾಯಿತು ಮೈದಾನದಲ್ಲಿ ನಡೆಯಲಿದೆ. ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ಧ್ವಜಾರೋಹಣ ನೇರವೇರಿಸುವರು.

ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ರವಿಕುಮಾರ್ ಎಂ.ಜೆ., ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಹೀಮಾ ಸುಲ್ತಾನ ನಜೀರ್ ಅಹಮದ್, ಲೋಕಸಭಾ ಸದಸ್ಯರುಗಳಾದ ಪ್ರತಾಪಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕರಾದ ಕೆ. ವೆಂಕಟೇಶ್, ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಎಂ.ಕೆ. ಸೋಮಶೇಖರ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಹೆಚ್.ಪಿ. ಮಂಜುನಾಥ್ ಶಾಸಕರಾದ ಜಿ.ಟಿ. ದೇವೇಗೌಡ ಸಾ.ರಾ.ಮಹೇಶ್, ಎಸ್. ಚಿಕ್ಕಮಾದು, ಕಳಲೆ ಕೇಶವಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ಕೆ.ವಿ ನಾರಾಯಣಸ್ವಾಮಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಧ್ರುವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್.ಎ. ವೆಂಕಟೇಶ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ನಂಜಪ್ಪ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್ ಎನ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ವಿ. ಸೀತಾರಾಮು, ಹಾಗೂ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ  ಭಾಗವಹಿಸುವರು.

ಅಂದು ಸಂಜೆ 4 ರಿಂದ 5 ಗಂಟೆಯವರೆಗೆ ಕಿರಿಯ ಹಿರಿಯ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾಮಂದಿರದಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ರಾಜ್ಯ ಸರ್ಕಾರಿ ನೌಕರರಿಂದ ಸಂಘದ ವತಿಯಿಂದ ದೇಶಭಕ್ತಿ ಗೀತೆಗಳು, ನೆಹರು ಯುವಕೇಂದ್ರ ವತಿಯಿಂದ ಡೊಳ್ಳುಕುಣಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ವತಿಯಿಂದ ಶ್ರೀ ಶ್ರೀಧರ ಜೈನ್ ತಂಡದವರಿಂದ ಭಾರತೀಯ ನೃತ್ಯ ವೈಭವ ರೂಪಕ, ಉತ್ತರ ವಲಯದ ಆಯ್ದ ಶಾಲಾ ಮಕ್ಕಳಿಂದ ಹಾಗೂ ಹಿಂದುಳಿದ ವರ್ಗಗಳ, ಸಮಾಜ ಕಲ್ಯಾಣ ಮತ್ತು ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ವಸತಿ ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

-ಎನ್.ಬಿ.

Leave a Reply

comments

Related Articles

error: