ಮೈಸೂರು

ಆ.13 ರಂದು ಮೈಸೂರು ವಿಭಾಗ ಮಟ್ಟದ ಕಾರ್ಯಕಾರಿ ಸಭೆ

ಮೈಸೂರು,ಆ.12: ಕರ್ನಾಟಕ ರಾಜ್ಯ ವಾಲ್ಮೀಕಿ ಪರಿಶಿಷ್ಟ ಪಂಗಡ ನೌಕರರ ಸಂಘವು ಆ.13 ರಂದು ಮೈಸೂರು ವಿಭಾಗ ಮಟ್ಟದ ಕಾರ್ಯಕಾರಿ ಸಭೆಯನ್ನು ಹಮ್ಮಿಕೊಂಡಿದೆ ಎಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ರಾಜ್ಯಾಧ‍್ಯಕ್ಷ ದ್ಯಾವಪ್ಪನಾಯಕ ತಿಳಿಸಿದರು.

ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ರಾಜ್ಯ ಮಟ್ಟದ ನೌಕರರ ಸಮಾವೇಶವನ್ನು ಮಾಡಲು ತೀರ್ಮಾನ ಕೈಗೊಂಡಿದೆ. ಮುಂದಿನ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗುವಂತೆ ವಿಭಾಗದ ಮಟ್ಟದಲ್ಲಿ ಜಿಲ್ಲಾ ಮತ್ತು ತಾಲೂಕು ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ನೇಮಕ ಮಾಡುವುದು, ಸಂಘದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಡುವುದು ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಅನುಷ್ಠಾನಗೊಳಿಸಲು ಅಂದು ಬೆ.11 ಗಂಟೆಗೆ ಸಭೆ ಆಯೋಜಿಸಲಾಗಿದೆ. ಸಭೆಗೆ ರಾಜ್ಯಾಧ‍್ಯಕ್ಷ ತಿಪ್ಪೇಸ್ವಾಮಿ,ಪ್ರಧಾನ ಕಾರ್ಯದರ್ಶಿ ರಾಜಶೇಖರ್, ರಾಜ್ಯ ಉಪಾಧ‍್ಯಕ್ಷ ಭೀಮ್ ರಾಜ್ ಹವಾಲ್ದಾರ್ , ಜಗದೀಶ್ ಮೂರ್ತಿ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ಶ್ರೀಧರ್ ಚಾಮುಂಡಿಬೆಟ್ಟ, ಪ್ರಭಾಕರ್ ಹುಣಸೂರು, ಶಿವಪ್ರಕಾಶ್ ಹಾಜರಿದ್ದರು. (ವರದಿ: ಎಲ್.ಜಿ)

Leave a Reply

comments

Related Articles

error: